ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 14 ರಂದು ಐವರಲ್ಲಿ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ಈ ಪೈಕಿ ಮೂವರು ದುಬೈನಿಂದ ಮರಳಿದವರಾಗಿದ್ದು, ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಹನ್ನೊಂದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಉಡುಪಿಯಲ್ಲಿ ರವಿವಾರ ಮತ್ತೆ 21 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಸೋಂಕಿತರ ಪೈಕಿ ಹದಿನೆಂಟು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ ಹಾಗೂ ತಮಿಳುನಾಡಿನಿಂದ ಮರಳಿದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ೫೩ ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇವರ ಸಂಪರ್ಕ ಪತ್ತೆಯಾಗಿಲ್ಲ.
ಕರ್ನಾಟಕದಲ್ಲಿ ರವಿವಾರದಂದು ಮತ್ತೆ ಹೊಸದಾಗಿ 176 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏಳು ಸಾವಿರದ ಗಡಿ ದಾಟಿದೆ.
Click this button or press Ctrl+G to toggle between Kannada and English