ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು 149 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 23 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ. ಜಿಲ್ಲೆಯಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 2 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಂದು 23 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 291 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 12,915 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 11,835 ಮಂದಿಗೆ ವರದಿ ನೆಗೆಟಿವ್ ಬಂದಿದೆ. 1028 ಮಂದಿಯ ವರದಿ ಪಾಸಿಟಿವ್ ಆಗಿದೆ. ಇನ್ನು 52 ಸ್ಯಾಂಪಲ್ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಸೋಮವಾರ 23 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 736 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.
ಇಂದು ರಾಜ್ಯದಲ್ಲಿ ಮತ್ತೆ 213 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಸೋಮವಾರರಾಜ್ಯದಲ್ಲಿ ಇಂದು 180 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ರಾಜ್ಯದಲ್ಲಿ 4135 ಒಟ್ಟು ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2987 ಸಕ್ರಿಯ ಪ್ರಕರಣಗಳಿವೆ.
Click this button or press Ctrl+G to toggle between Kannada and English