ಮಂಗಳೂರು : ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದ್ದು ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ ಪತ್ರಿಯೊಬ್ಬ ವಿದ್ಯಾರ್ಥಿಯ ಜವಬ್ದಾರಿ ಸರ್ಕಾರದ ಮೇಲೆಯಿದ್ದು, ಪೋಷಕರು ಅಂತಕ ಒಳಗಾಗುವುದು ಬೇಡ. ಅವಶ್ಯಕತೆವಿದ್ದಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ಒಂದು ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ದ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ೯೫ ಪರೀಕ್ಷೆ ಕೇಂದ್ರಗಳಿದ್ದು ಹೆಚ್ಚುವರಿಯಾಗಿ ೧೯ ಕೇಂದ್ರಗಳನ್ನು ಗುರುತಿಸಲಾಗಿದೆ. ೧೫೮೫ ಕೊಠಡಿಗಳಲ್ಲಿ ೩೦೮೩೫ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗೊಂಡಿದೆ. ಗಡಿಭಾಗದಿಂದ ಬರುವ ೩೬೭ ವಿದ್ಯಾರ್ಥಿಗಳಿಗೆ ಬಸ್ಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಜಿಲ್ಲೆಯಲ್ಲಿ ನೋಂದಾಯಿಸಿ ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ೧೩೧೮ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದರು.
ಪತ್ರಿ ಪರೀಕ್ಷಾ ಕೇಂದ್ರಗಳಿಗೆ ಭಾರತ್ ಸ್ಕೌಟ್-ಗೈಡ್ ಸಂಸ್ಥೆಯಿAದ ೪ ಸದಸ್ಯರ ಜೊತೆ ಆರೋಗ್ಯ, ಪೊಲೀಸ್ ಇಲಾಖೆಯಿಂದ ತಲಾ ಇಬ್ಬರು ಸಿಬ್ಬಂದಿಯನ್ನು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವ ಜವಾಬ್ದಾರಿಯನ್ನು ಆಯಾ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್, ಮಹನಗರಪಾಲಿಕೆ, ನಗರಸಭೆ. ಪಟ್ಟಣ ಪಂಚಾಯತ್ ಮತ್ತು ಪುರಸಭೆಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಭಾಗಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ದಿವಾಕರ್, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ವೇದವ್ಯಾಸ ಕಾಂತ್, ಯು.ಟಿ. ಖಾದರ್, ಉಮಾನಾಥ ಕೋಟ್ಯಾನ್, ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೇ ಗೌಡ ಮತ್ತಿತರರು ಉಪಸ್ಥಿತರಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ ಅವರು ಸಭೆಗೆ ಪರೀಕ್ಷಾ ಸಿದ್ಧತೆಗಳ ಮಾಹಿತಿ ನೀಡಿದರು.
Click this button or press Ctrl+G to toggle between Kannada and English