ಧಾರವಾಡ: 4 ಕೋವಿಡ್ ಪಾಸಿಟಿವ್ ಪ್ರಕರಣ

10:52 AM, Wednesday, June 24th, 2020
Share
1 Star2 Stars3 Stars4 Stars5 Stars
(No Ratings Yet)
Loading...

Deepa-cholanಧಾರವಾಡ: ಜಿಲ್ಲೆಯಲ್ಲಿ ಇಂದು 4 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ- 9416 (55 ವರ್ಷ, ಪುರುಷ) ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಪಿ- 9417 ( 57 ವರ್ಷ ,ಪುರುಷ ) ನೆಗಡಿ, ಕೆಮ್ಮು ,ತೀವ್ರ ಜ್ವರದಿಂದ (ಐಎಲ್ಐ) ಬಳಲುತ್ತಿದ್ದರು.ಪಿ-9418 ( 36 ವರ್ಷ,ಪುರುಷ ) ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು. ಪಿ -9419 ( 43 ವರ್ಷ,ಪುರುಷ ) ಪಿ.8289 ಅವರೊಂದಿಗೆ ಸಂಪರ್ಕ ಹೊಂದಿದ್ದರು.

14 ಜನ ಗುಣಮುಖರಾಗಿ ಬಿಡುಗಡೆ : ಕೋವಿಡ್ ನಿಂದ ಗುಣಮುಖರಾಗಿರುವ 14 ಜನ ಜೂನ್ 22 ರಂದು ರಾತ್ರಿ ಕಿಮ್ಸ್ ನಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 206ಕ್ಕೆ ಏರಿಕೆಯಾಗಿದೆ. ಈಗಾಗಲೇ 90 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English