ಹುಬ್ಬಳ್ಳಿ: ಕೊರೋನಾ ವೈರಸ್ ಪ್ರಕರಣಗಳು ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವೃದ್ದಿಸುತ್ತಿವೆ. ಉತ್ತರ ಕರ್ನಾಟಕ ರಾಜಧಾನಿ, ಛೋಟಾ ಮುಂಬೈ, ವಾಣಿಜ್ಯ ನಗರಿ ಎಂದೇ ಖ್ಯಾತಿ ಹೊಂದಿರುವ ಹುಬ್ಬಳ್ಳಿಯ ಪ್ರತಿಷ್ಠಿತ ಮೂರುಸಾವಿರ ಮಠದ ಪಕ್ಕದಲ್ಲಿಯೇ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಮಠದ ಆವರಣವನ್ನು ಸೀಲ್ ಡೌನ್ ಮಾಡಲಾಗಿದೆ.
ಪ್ರತಿದಿನ ಭಕ್ತರು ಗದ್ದುಗೆ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೀಗ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಮಠದಲ್ಲಿ ಭಕ್ತರಿಗೆ ಗದ್ದುಗೆಯ ದರ್ಶನ ಭಾಗ್ಯ ಇಲ್ಲವಾಗಿದೆ.
ಮಠದ ಪಕ್ಕದಲ್ಲೆ ಪಿ- 9418 ಸೊಂಕಿತನಿಂದ ಮಠದ ಸುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
ವರದಿ : ಶಂಭು
ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ.
Click this button or press Ctrl+G to toggle between Kannada and English