ಕೋವಿಡ್ ಸಿದ್ದತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

12:22 PM, Thursday, June 25th, 2020
Share
1 Star2 Stars3 Stars4 Stars5 Stars
(No Ratings Yet)
Loading...

sslc examಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 30835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಇದಕ್ಕಾಗಿ 1585 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ.

ಬಂಟ್ವಾಳ – 5300, ಬೆಳ್ತಂಗಡಿ – 3849, ಮಂಗಳೂರು ಉತ್ತರ – 6584, ಮಂಗಳೂರು ದಕ್ಷಿಣ – 5968, ಮೂಡಬಿದ್ರೆ – 2107, ಪುತ್ತೂರು – 5007, ಸುಳ್ಯ – 2020 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಕೇವಲ 20 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರವಿರುವ ಸ್ಥಳದಲ್ಲಿ ಯಾವುದೇ ಕೆಂಪು ವಲಯ ಅಥವಾ ಕಂಟೈನ್‍ಮೆಂಟ್ ವಲಯಗಳು ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಝೇಶನ್ ಮಾಡಲಾಗಿದ್ದು, ಪ್ರತೀ ಪರೀಕ್ಷೆ ಮುಗಿದ ತಕ್ಷಣ ಮತ್ತೊಮ್ಮೆ ಸ್ಯಾನಿಟೈಝೇಶನ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಮಾಸ್ಕ್‍ಗಳನ್ನು ವಿತರಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಲು 632 ಥರ್ಮಲ್ ಸ್ಕ್ಯಾನರ್‍ಗಳನ್ನು ಸರಬರಾಜು ಮಾಡಲಾಗಿದೆ.

sslc examsslc examಕೇರಳ ರಾಜ್ಯದಿಂದ ಆಗಮಿಸುವ 367 ವಿದ್ಯಾರ್ಥಿಗಳಿಗೆ ಜಿಲ್ಲೆಯ 29 ಗಡಿ ಭಾಗದ ಪ್ರವೇಶ ಸ್ಥಳಗಳಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ವಾಹನದ ವ್ಯವಸ್ಥೆ ಮಾಡಿ, ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಪೈಕಿ 5 ಗಡಿ ಪ್ರವೇಶ ಸ್ಥಳಗಳಲ್ಲಿ ಏಕೈಕ ವಿದ್ಯಾರ್ಥಿ ಮಾತ್ರ ಇದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೊಂದಾಯಿಸಿದ 1318 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಮಂಗಳೂರಿನಲ್ಲಿ 95 ಪರೀಕ್ಷಾ ಕೇಂದ್ರಗಳಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಕೇರಳದ 395 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ದಕ್ಷಿಣ ಕನ್ನಡದಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 1,318 ವಿದ್ಯಾರ್ಥಿಗಳು ಪರೀಕ್ಷೆಯನ್ನು ಇತರ ಜಿಲ್ಲಾ ಪರೀಕ್ಷಾ ಕೇಂದ್ರದಲ್ಲಿ ಬರೆಯಲು ನಿರ್ಧರಿಸಿದ್ದಾರೆ. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಬರಲು ಬಸ್‌ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲದೆ, ಮಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಬಳಸಲು 632 ಥರ್ಮಲ್ ಸ್ಕ್ಯಾನರ್‌ಗಳನ್ನು ಬಳಸಲಾಗುತ್ತಿದೆ. ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಎಲ್ಲಾ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಗಿದೆ.

ಮಂಗಳೂರಿನ ವಿವಿಧ ಪರೀಕ್ಷಾ‌ ಕೇಂದ್ರಗಳಿಗೆ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿದ್ದು ಎಲ್ಲಾ ವ್ಯವಸ್ಥೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ರಾಮಕೃಷ್ಣ ಪ್ರೌಢ ಶಾಲೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, 30 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಕಡೆ ಯಾವುದೇ ಅವ್ಯವಸ್ಥೆ ಆಗದಂತೆ ನೋಡಿಕಂಡಿದ್ದೇವೆ. ಕಾಸರಗೋಡಿನಿಂದ 367 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದಾರೆ. ಸುರಕ್ಷಿತವಾಗಿ ಅವರನ್ನು ಮರಳಿ ಮನೆಗೆ ತಲುಪಿಸುತ್ತೇವೆ. ಕಾಸರಗೋಡಿನಿಂದ ಯಾರೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು 14,039 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಜಿಲ್ಲಾ ಪಂಚಾಯತ್ ಸಿಇಒ ಪ್ರೀತಿ ಗೆಹ್ಲೋಟ್, ಈ ಆರು ದಿನಗಳ ಪರೀಕ್ಷೆಗಳನ್ನು ಯಾವುದೇ ಸಮಸ್ಯೆಗಳಿಲ್ಲದೆ ನಡೆಸಲು ನಾವು ಒಂದು ತಿಂಗಳಿನಿಂದ ನಿರಂತರವಾಗಿ ಸಿಬ್ಬಂದಿಗೆ ತರಬೇತಿ ನೀಡುತ್ತಿದ್ದೇವೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿ ವಿದ್ಯಾರ್ಥಿಗೆ ಸ್ಯಾನಿಟೈಜರ್ ನೀಡಲಾಗುತ್ತದೆ ಮತ್ತು ಥರ್ಮಲ್ ಸ್ಕ್ಯಾನಿಂಗ್ ಅನ್ನು ಮಾಡಲಾಗುತ್ತದೆ. ಹಾಗೆಯೇ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ತರಗತಿಯಲ್ಲಿರುವ ಶಿಕ್ಷಕರಿಗೂ ಥರ್ಮಲ್ ಸ್ಕ್ಯಾನಿಂಗ್ ಅನ್ನು ಮಾಡಲಾಗುತ್ತದೆ. ಉಡುಪಿಯ 599 ವಿದ್ಯಾರ್ಥಿಗಳು ಹೊರಗಿನ ಜಿಲ್ಲೆಗಳಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಯಾವುದೇ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದರೆ, ಅವರು ಒಂದೇ ಕೋಣೆಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲಾರಿಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದ್ದು ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗೆಯೇ ಸಾಮಾಜಿಕ ಅಂತರವನ್ನು ಗಮನದಲ್ಲಿರಿಸಿ ಪರೀಕ್ಷಾ ಕೇಂದ್ರಗಳನ್ನು ಸಿದ್ಧಗೊಳಿಸಲಾಗಿದೆ.

sslc exam

sslc exam

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English