ಬಂಟ್ವಾಳ: ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವಾಂತಿ ಮಾಡಿದ ಘಟನೆ ಘಟನೆ ಗುರುವಾರ ನಡೆದಿದೆ.
ವಿದ್ಯಾರ್ಥಿನಿಯು ಪರೀಕ್ಷೆ ಬರೆಯಲು ಆರಂಭಿಸಿದ ಬಳಿಕ ಈ ಸಮಸ್ಯೆ ಕಾಣಿಸಿಕೊಂಡಿದ್ದು, ತತ್ ಕ್ಷಣ ವೈದ್ಯಾಧಿಕಾರಿಗಳು ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ.
ಕೋವಿಡ್-19 ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ವಿತರಿಸಲಾಗಿದೆ. ಕೊಠಡಿ ಪ್ರವೇಶಕ್ಕೆ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿ ನಂತರ ಸ್ಯಾನಿಟೈಸರ್ ವಿತರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಅನಾರೋಗ್ಯ ಕಂಡು ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯೂ ಮಾಡಲಾಗಿದೆ.
ವೈದ್ಯರ ತಂಡ ಪರೀಕ್ಷೆ ನಡೆಸಿದ ಬಳಿಕ ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆ ಬರೆದಿದ್ದಾಳೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English