ನವದೆಹಲಿ : ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ತೀರ್ಪು ಮುಂದೂಡಲು ರಮೇಶ್ ಚಂದ್ರ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ತ್ರಿಸದಸ್ಯ ವಿಶೇಷ ಪೀಠವು ಸೆಪ್ಟೆಂಬರ್ 30ರಂದು ಗುರುವಾರ ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಲಿದೆ.
ಸೆಪ್ಟೆಂಬರ್ 24ರಂದು ಅಲಹಾಬಾದ್ ಹೈಕೋರ್ಟ್ ಪ್ರಕಟಿಸಬೇಕಿದ್ದ ತೀರ್ಪಿನ ತಾತ್ಕಾಲಿಕ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೆರವುಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ, ಅಫ್ತಾಬ್ ಆಲಂ ಮತ್ತು ಕೆ.ಎಸ್. ರಾಧಾಕೃಷ್ಣನ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಿ ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಯಾವುದೇ ಸಮಯದಲ್ಲಿ ಬೇಕಾದರೂ ಪ್ರಕಟಿಸಬಹುದು ಎಂದು ತಿಳಿಸಿದೆ.
Click this button or press Ctrl+G to toggle between Kannada and English