ಕಾಂಗ್ರೆಸ್ ಮುಖಂಡ ಮೊಹಿಯುದ್ದೀನ್ ಬಾವಾ ಮನೆಯಲ್ಲಿ ಕೊರೊನಾ, ಸೀಲ್ಡೌನ್

9:54 PM, Friday, June 26th, 2020
Share
1 Star2 Stars3 Stars4 Stars5 Stars
(No Ratings Yet)
Loading...

moideen-bava-house ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಮನೆಯಲ್ಲಿ ಕೊರೊನಾ  ಪ್ರಕರಣ ಕಂಡು ಬಂದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮನೆಗೆ  ಯಾರು ಪ್ರವೇಶಿಸಬಾರದು ಎಂಬ ನಾಮ ಫಲಕ ಹಾಕಿ ಮಂಗಳೂರು ಮಹಾನಗರ ಪಾಲಿಕೆ ಸೀಲ್ಡೌನ್ ಮಾಡಲಾಗಿದೆ.

ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಪುತ್ರ ಬೆಂಗಳೂರಿನಲ್ಲಿ ವಾಸವಿದ್ದು, ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢವಾಗಿದೆ ಇದರಿಂದಾಗಿ ಅವರ ಮನೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಶಾಸಕರ ಪುತ್ರನು ಈ ಮೊದಲು ಬೆಂಗಳೂರಿನಲ್ಲಿದ್ದರು. ಅವರ ಗಂಟಲಿನ ದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮನೆಯ ಇತರ ಸದಸ್ಯರ ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದ್ದು, ಮನೆಯನ್ನು ಸಾರ್ವಜನಿಕರ ಭೇಟಿಗೆ ಬಂದ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಲಾಗಿದೆ.

moideen-bava-house

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English