ಮಂಗಳೂರು : ಮಂಗಳೂರು ಹೊರವಲಯದ ವಾಮಂಜೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಯೋರ್ವರಿಗೆ ಕೋವಿಡ್-19 ಪಾಸಿಟಿವ್ ಮಂಗಳವಾರ ವರದಿಯಾಗಿದೆ. ಇವರು ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಿಗೆ ಕೋವಿಡ್-19 ಸೋಂಕು ತಗುಲಿತ್ತು. ನಂತರ ಉಳ್ಳಾಲ ಠಾಣೆಯ ಎಸ್ಐ ಸೇರಿದಂತೆ ಹತ್ತು ಮಂದಿಗೆ ಸೋಂಕು ತಾಗಿತ್ತು. ಈತನ ಸಂಪರ್ಕದಿಂದಲೇ ಈ ಸಿಬ್ಬಂದಿಗೂ ಸೋಂಕು ತಾಗಿರುವ ಶಂಕೆ ವ್ಯಕ್ತವಾಗಿದೆ. ಇವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಮಂಗಳೂರು ಕೇಂದ್ರ ಕಾರಾಗೃಹದ ಖೈದಿಯೋರ್ವನಿಗೆ ಕೋವಿಡ್-19 ಸೋಂಕು ತಾಗಿರುವ ಬಗ್ಗೆ ವರದಿಯಾಗಿದೆ. ಈ ಖೈದಿ ಮನೋರೋಗದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈತ ವೆನ್ಲಾಕ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಸಿಬ್ಬಂದಿಯಿಂದ ಸೋಂಕು ಹರಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿ ಕ್ವಾರೆಂಟೈನ್ ನಲ್ಲಿರಲು ಸೂಚಿಸಲಾಗಿದೆ.
Click this button or press Ctrl+G to toggle between Kannada and English