ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಇಬ್ಬರು ಬಲಿ

12:29 PM, Wednesday, July 1st, 2020
Share
1 Star2 Stars3 Stars4 Stars5 Stars
(No Ratings Yet)
Loading...

corona-death ಮಂಗಳೂರು : ಬುಧವಾರ ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು 51 ವರ್ಷದ ಬೆಂಗ್ರೆ ನಿವಾಸಿ ಮತ್ತು 31 ವರ್ಷದ ಭಟ್ಕಳ ‌ನಿವಾಸಿ ಎಂದು ಗುರುತಿಸಲಾಗಿದೆ.

ಇದರಿಂದ ಜಿಲ್ಲೆಯಲ್ಲಿ ಕೊರೋನದಿಂದ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೋರ್ವ ಯುವಕನನ್ನು 31 ವರ್ಷದ ಭಟ್ಕಳ ‌ನಿವಾಸಿ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English