ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬುಧವಾರ 84 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತೆಯಿಂದ ಬಿಡುಗಡೆಗೊಂಡಿದ್ದು, ಸೋಂಕಿತರ ಸಂಖ್ಯೆ 823ಕ್ಕೆ ಏರಿಕೆಯಾಗಿದೆ.
ಆ ಮೂಲಕ ಗುಣಮುಖರಾದವರ ಸಂಖ್ಯೆ 444ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 372 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಪೈಕಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
38 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಶಾರ್ಜಾದಿಂದ ಮರಳಿರುವ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಂತರ್‌ರಾಜ್ಯ ಪ್ರಯಾಣದ ಮೂಲಕ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಬುಧವಾರದಂದು 28 ಐಎಲ್‌ಐ ಪ್ರಕರಣಗಳು ಪತ್ತೆಯಾಗಿವೆ. 7 ಮಂದಿ ಸೋಂಕಿತರ ಸಂಪರ್ಕದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಪ್ರೀ ಸರ್ಜರಿ ಸ್ಯಾಂಪಲ್- ನಾಲ್ಕು ಮಂದಿಯದ್ದು ಲಭ್ಯವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 22 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಪ್ರಾಥಮಿಕ ಸಂಪರ್ಕದಿಂದ ಸುಮಾರು 14 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ.
Click this button or press Ctrl+G to toggle between Kannada and English