ದ.ಕ. ಜಿಲ್ಲೆಯಲ್ಲಿ 47 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿ

8:33 PM, Friday, July 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

corona-death ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-17113  ಮಡಿಕೇರಿ ಮೂಲದ 47 ವರ್ಷದ  ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಇದೀಗ ಮೃತಪಟ್ತಿದ್ದಾರೆ ಎಂದು ತಿಳಿದು ಬಂದಿದೆ.

ಅವರನ್ನು ಜುಲೈ2 ರಂದು ಚಿಂತಾಜನಕ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರಿಗೆ ಅಧಿಕ ರಕ್ತದೊತ್ತಡ, ಮಧುಮೇಹ, ಮೇದೋಜೀರಕದ ಉರಿವಾತ, ಮೂತ್ರ ಪಿಂಡದ ವೈಫಲ್ಯ, ಅಲ್ಕೋ ಹಾಲಿಕ್ ರೋಗ, ಮಲ್ಟಿ ಆರ್ಗನ್ ಡೈಸ್ ಫುನ್ಕ್ಷನ್ ಸಿನ್ಡ್ರೋಮ್ಸ್ ಮೊದಲಾದ ರೋಗ ಲಕ್ಷಣಗಳಿದ್ದವು.

ಇನ್ನು ಸದ್ಯ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ವಿವಿಧ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಸೋಂಕಿನಿಂದ ಮೃತರಾಗುತ್ತಿರುವ ವರದಿಗಳು ಕೂಡ ಲಭ್ಯವಾಗುತ್ತಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English