ರಾಜ್ಯದಲ್ಲಿ ಶನಿವಾರ ಒಂದೇ ದಿನ 42 ಮಂದಿ ಕೊರೋನಾ ಸೋಂಕಿನಿಂದ ಮೃತ,1839 ಮಂದಿಗೆ ಪಾಸಿಟಿವ್

12:15 AM, Sunday, July 5th, 2020
Share
1 Star2 Stars3 Stars4 Stars5 Stars
(No Ratings Yet)
Loading...

Karnataka Coronaಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ  42 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1172 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1839 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 21549ಕ್ಕೆ ಏರಿಕೆಯಾಗಿದೆ.

ಉಳಿದಂತೆ ದಕ್ಷಿಣ ಕನ್ನಡದಲ್ಲಿ 75, ಬಳ್ಳಾರಿಯಲ್ಲಿ 73, ಬೀದರ್‌ನಲ್ಲಿ 51, ಧಾರವಾಡದಲ್ಲಿ 45, ರಾಯಚೂರಿನಲ್ಲಿ 41, ಮೈಸೂರಿನಲ್ಲಿ 38, ಕಲಬುರಗಿ, ವಿಜಯಪುರದಲ್ಲಿ ತಲಾ 37, ಮಂಡ್ಯ, ಉತ್ತರಕನ್ನಡದಲ್ಲಿ ತಲಾ 35, ಶಿವಮೊಗ್ಗದಲ್ಲಿ 31, ಹಾವೇರಿಯಲ್ಲಿ 28, ಬೆಳಗಾವಿಯಲ್ಲಿ 27, ಹಾಸನದಲ್ಲಿ 25, ಉಡುಪಿಯಲ್ಲಿ 18, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ತಲಾ 12, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲಿ ತಲಾ 11, ದಾವಣಗೆರೆಯಲ್ಲಿ 7, ಚಾಮರಾಜನಗರದಲ್ಲಿ 5, ಗದಗದಲ್ಲಿ 4, ಕೊಪ್ಪಳ, ಚಿಕ್ಕಮಗಳೂರಿನಲ್ಲಿ 3, ರಾಮನಗರದಲ್ಲಿ2, ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿವೆ.

ಬೆಂಗಳೂರು ನಗರವೊಂದರಲ್ಲೇ 24 ಮಂದಿ ಮೃತಪಟ್ಟಿದ್ದಾರೆ. ಇವರಿಗೆ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಗ್ರಾಮಾಂತರದಲ್ಲಿ 80 ವರ್ಷದ ಮಹಿಳೆ, ಬೆಂಗಳೂರು ನಗರದಲ್ಲಿ 72, 66, 51, 84 ವರ್ಷದ ವ್ಯಕ್ತಿಗಳು, ಧಾರವಾಡದಲ್ಲಿ 82, ಬೆಂಗಳೂರು ನಗರದಲ್ಲಿ 45, 57, 63,68,65,66 ವರ್ಷದ ವ್ಯಕ್ತಿಗಳು ಹಾಗೂ 50, 52, 42 , 60 ವರ್ಷದ ಮಹಿಳೆಯರು, 39, 56, 66, 78, 62, 60, 68 ವ್ಯಕ್ತಿಗಳು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡದಲ್ಲಿ 47 ವರ್ಷದ ವ್ಯಕ್ತಿ, ಬೆಂಗಳೂರು ನಗರದಲ್ಲಿ 84 ವರ್ಷದ ವೃದ್ಧ, ಹಾಸನದಲ್ಲಿ 32 ವರ್ಷದ ಗಂಡು, ಧಾರವಾಡದಲ್ಲಿ 80 ವರ್ಷದ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ 60, 67, 65 ವರ್ಷದ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ 45 ವರ್ಷದ ಮಹಿಳೆ, 75 ಮತ್ತು 73 ವರ್ಷದ ವ್ಯಕ್ತಿಗಳು, ಬೀದರ್ ನಲ್ಲಿ 55, 24, 70, 50, 70, 31 ವರ್ಷದ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ 439 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 9244ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 11966 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 226 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English