ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನಡೆಯಿತು.
ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಇದೇ ವೇಳೆ ಮೂಡಾ ಅಧ್ಯಕ್ಷ ರವಿಶಂಕರ ಮಿಜಾರ್, ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ್, ಕಾರ್ಪೊರೇಟರ್ ವೀಣಾ ಮಂಗಳಾ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ ನೇತ್ರಾವತಿ ಸೇತುವೆಗೆ 55 ಲಕ್ಷ ರೂ. ವೆಚ್ಚದಲ್ಲಿ ರಕ್ಷಣಾ ಬೇಲಿ ಮತ್ತು ಸಿಸಿ ಕೆಮರಾ ಅಳವಡಿಸಲಾಗುವುದು. ಉಕ್ಕಿನ ಸರಳುಗಳನ್ನು ಉಪಯೋಗಿಸಿ ಸೇತುವೆಯ ಇಕ್ಕೆಲಗಳಲ್ಲಿ 800 ಮೀ. ಉದ್ದದ ರಕ್ಷಣಾ ಬೇಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾಫಿ ಡೇ ಮಾಲಕ ಸಿದ್ದಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡ ನಂತರದ ದಿನಗಳಲ್ಲಿ ಈ ಸೇತುವೆಯಲ್ಲಿ ಆತ್ಮಹತ್ಯೆಗಳ ಪ್ರಕರಣ ಜಾಸ್ತಿಯಾಗುತ್ತಿತ್ತು. ಅಲ್ಲದೇ ಈ ಸೇತುವೆಯನ್ನು ಸುಸೈಡ್ ಸ್ಪಾಟ್ ಎಂದು ಕರೆಯಲಾಗುತ್ತಿತ್ತು.
Click this button or press Ctrl+G to toggle between Kannada and English