33 ಗಂಟೆಗಳ ಸಂಪೂರ್ಣ ಲಾಕ್ ಡೌನ್, ಮಂಗಳೂರು ಸ್ತಬ್ಧ

3:01 PM, Sunday, July 5th, 2020
Share
1 Star2 Stars3 Stars4 Stars5 Stars
(No Ratings Yet)
Loading...

Lockdown ಮಂಗಳೂರು :  ರಾಜ್ಯ ಸರಕಾರ ಮಾರಕ ರೋಗ ಕೊರೋನ ಹಿನ್ನೆಲೆಯಲ್ಲಿ ಪ್ರತಿ ರವಿವಾರ ಕರ್ಫ್ಯೂ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶನಿವಾರ ರಾತ್ರಿ 8 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ 33 ಗಂಟೆಗಳ ಸಂಪೂರ್ಣ ಲಾಕ್ ಡೌನ್ ಜಾರಿಮಾಡಲಾಗಿದೆ.

ಮಂಗಳೂರು  ನಗರದಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಓಡಾಡುತ್ತಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಪಹರೆ ನೀಡುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳು ಮಾತ್ರವಲ್ಲದೆ ಒಳ ರಸ್ತೆಗಳೂ ಬಹುತೇಕ ನಿರ್ಜನವಾಗಿವೆ. ಕೆಲವೇ ಕೆಲವರು ಮನೆ ಸಮೀಪದ ಅಂಗಡಿಗಳಿಗೆ ತೆರಳುತ್ತಿರುವುದು ಕಂಡು ಬರುತ್ತಿತ್ತು.

ನಗರದ ಪ್ರಮುಖ ರಸ್ತೆಗಳಲ್ಲಿ ಕೆಲವೊಂದು ಸರಕು ಸಾಗಾಣಿಕೆಯ ವಾಹನ, ಆಸ್ಪತ್ರೆ ಸಿಬ್ಬಂದಿಯನ್ನು ಸಾಗಿಸುವ ವಾಹನಗಳು ಮಾತ್ರ ಓಡಾಡುತ್ತಿವೆ.
ನಗರದ ಪಂಪ್ವೆಲ್, ಜಪ್ಪಿನಮೊಗರು, ಅಂಬೇಡ್ಕರ್ ವ್ರತ್ತ, ಕ್ಲಾಕ್ ಟವರ್, ಮೊದಲಾದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಓಡಾಟ ನಡೆಸುತ್ತಿರುವ ವಾಹನಗಳನ್ನು ತಡೆದು ವಿಚಾರಿಸುತ್ತಿದ್ದಾರೆ.

ಜನರೆಲ್ಲಾ ಮನೆಗಳಲ್ಲಿ ಉಳಿದು ಸರಕಾರಿ ಆದೇಶವನ್ನು ಪಾಲಿಸುತ್ತಿದ್ದರೆ, ಕೊರೋನ ಸೋಂಕಿನ ಭೀತಿಯ ನಡುವಯೇ ಪೌರ ಕಾರ್ಮಿಕರು ರಸ್ತೆ ಸ್ವಚ್ಚತಾ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

sunday lockdown

sunday lockdown

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English