ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜೂನ್ 5 ರಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈ ನಡುವೆ 576 ಮಂದಿಯ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ. 75 ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ನಡುವೆ 10 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ ಪ್ರಾಥಮಿಕ ಸಂಪರ್ಕದಿಂದ 35 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 40 ಮಂದಿಯಲ್ಲಿ ಐಎಲ್ ಐ ಪ್ರಕರಣ ದಾಖಲಾಗಿದೆ. ಇಬ್ಬರಲ್ಲಿ ಸಾರಿ ಪ್ರಕರಣಗಳು ಪತ್ತೆಯಾಗಿವೆ. ರ್‍ಯಾಂಡಮ್ ಪರೀಕ್ಷೆಯಲ್ಲಿ 48 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಬ್ಬರಲ್ಲಿ ಪ್ರಿ ಸರ್ಜರಿ ಪ್ರಕರಣಾಗಳು ಪತ್ತೆಯಾಗಿವೆ. ಸೌದಿ, ಮಸ್ಕತ್, ದುಬೈನಿಂದ ಮರಳಿದ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು, ಮುಂಬೈ, ಬಿಹಾರದಿಂದ ಮರಳಿದ ಒಟ್ಟು 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಡೆಲಿವರಿ ಇಬ್ಬರಲ್ಲಿ, ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಸರ್ಜರಿ ಒಬ್ಬರಲ್ಲಿ, ಪ್ರಿ ಸರ್ಜರಿ ಸ್ಯಾಂಪಲ್ ಬಿಫೋರ್ ಬಯೋಪ್ಸಿ ಒಬ್ಬರಲ್ಲಿ ಹಾಗೂ ಹಡಗಿನ ಮೂಲಕ ಮಲೇಶ್ಯಾದಿಂದ ಮರಳಿದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 45 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ನಡುವೆ 22 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಆ ಮೂಲಕ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1322ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 1136 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 183 ಸಕ್ರಿಯ ಪ್ರಕರಣಗಳಿವೆ. ರವಿವಾರದಂದು ಜಿಲ್ಲೆಯಲ್ಲಿ 518 ಮಂದಿಯ ವರದಿ ನೆಗೆಟಿವ್ ಬಂದಿದೆ.
Click this button or press Ctrl+G to toggle between Kannada and English