ಕೊರೊನಾ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34, ಉಡುಪಿ ಜಿಲ್ಲೆಯಲ್ಲಿ 40 ಮಂದಿಯಲ್ಲಿ ಪತ್ತೆ

11:06 PM, Monday, July 6th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona positive ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ  34 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ

ಸೋಮವಾರದಂದು  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಒಟ್ಟು 1276 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 25 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಸೋಮವಾರ 40 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ.

ಇಂದಿನ ಪ್ರಕರಣಗಳಲ್ಲಿ 12 ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮಹಾರಾಷ್ಟ್ರದಿಂದ ಬಂದ 6 ಮಂದಿಯಲ್ಲಿ‌ ಇಂದು ಸೊಂಕು ಪತ್ತೆಯಾಗಿದೆ. 1 ಐಎಲ್ ಐ ಪ್ರಕರಣ, ರೋಗಿಗಳ ಸಂಪರ್ಕದಿಂದ 18 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಇಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ತೆಲಂಗಾಣ ದಿಂದ ಬಂದ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English