ತಲಪಾಡಿಯಲ್ಲಿರುವ ಕೇರಳ ಪೊಲೀಸರಿಂದಲೇ ಕೇರಳಿಗರಿಗೆ ಕಿರಿಕಿರಿ

11:08 PM, Tuesday, July 7th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

Kerala Borderಮಂಗಳೂರು  : ತಲಪಾಡಿ ಯಲ್ಲಿರುವ ಕೇರಳ ಪೊಲೀಸರು ಕೇರಳದಿಂದ ಮಂಗಳೂರಿಗೆ ಕೆಲಸಕ್ಕೆ ಬರುವವವರನ್ನು ಮಂಗಳೂರಿನಲ್ಲಿ ಕೋವಿಡ್  ನೆಪಯೊಡ್ಡಿ ತಡೆಹಿಡಿದ ಘಟನೆ ಮಂಗಳವಾರ ನಡೆದಿದೆ.

ಕೇರಳ ಸರಕಾರ ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಿದ ಕಾರಣ ಪಾಸ್ ಹಿಡಿದು ದಿನನಿತ್ಯ ಕೆಲಸಕ್ಕೆ ಬರುತ್ತಿದ್ದವರನ್ನು ಕೇರಳ ಪೊಲೀಸರು ತಲಪಾಡಿಯಲ್ಲಿ ತಡೆಹಿಡಿದಿರುವುದು ಗೊಂದಲಕ್ಕೆ ಕಾರಣವಾಗಿದೆ.100 ಕ್ಕೂ ಅಧಿಕ ಮಂದಿ ಸ್ಥಳದಲ್ಲಿ ಜಮಾಯಿಸಿ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ.

ಜು.11 ರ ಅವಧಿವರೆಗೆ ದ.ಕ ಜಿಲ್ಲಾಡಳಿತ ನೀಡಿರುವ ಪಾಸ್ ಇದೆ. ಅಷ್ಟು ಸಮಯ ಬಿಡಬೇಕು ಎಂದು ಮಂಗಳೂರಿಗೆ ಬರುವ ಮಂದಿ ಕೇರಳ ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಮಂಗಳೂರು ಬಂದ ಐದು ಮಂದಿಯಲ್ಲಿ ಕೋವಿಡ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರಕಾರದ ಕಠಿಣ ಆದೇಶ ಇರುವುದರಿಂದ ಮಂಗಳೂರಿಗೆ ಹೋದಲ್ಲಿ ಅಲ್ಲಿಯೇ ಉಳಿದುಕೊಳ್ಳಿ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಇದರಿಂದ ಪೊಲೀಸರ ಹಾಗೂ ಜನರ ನಡುವೆ ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ. ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English