ಮಂಗಳೂರು : ದ.ಕ. ಜಿಲ್ಲೆಯಲ್ಲಿ ಒಂದೇ ದಿನ 183 ಕೊರೋನ ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ. ಸೋಂಕಿತರ ಮೂಲ ಪತ್ತೆಯಾಗದವರ ಸಂಖ್ಯೆ ಯೇ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜನರನ್ನು ಆತಂಕ ಗೊಳಿಸಿದೆ.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1542ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಮಂದಿ ಹೊರಜಿಲ್ಲೆಯವರಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಜೊತೆಗೆ ಕೊರೋನಕ್ಕೆ ಬಲಿಯಾಗುವವರ ಸಂಖ್ಯೆಯೂ ಏರುಗತಿಯಲ್ಲಿದೆ. ಮೂಲ ಪತ್ತೆಯಾಗದಿರುವ ಪ್ರಕರಣಗಳು ಹೆಚ್ಚುತ್ತಿರುವುದು ಇನ್ನಷ್ಟು ಭೀತಿ ಮೂಡಿಸಿದೆ.
ಜಿಲ್ಲೆಯಲ್ಲಿ ಬುಧವಾರ ಸ್ವೀಕೃತವಾದ ವರದಿಯಲ್ಲಿನ ಸೋಂಕಿತರ ಪೈಕಿ 65 ಮಂದಿ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಇನ್ನುಳಿದಂತೆ ಐಎಲ್‌ಐ (ಶೀತ-ಜ್ವರ) 25, ನಾಲ್ಕು ಎಸ್‌ಎಆರ್‌ಐ (ಉಸಿರಾಟ ತೊಂದರೆ) ಪ್ರಕರಣ, ರ್ಯಾಂಡಮ್ ಪರೀಕ್ಷೆಯಲ್ಲಿ 22, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನಲ್ಲಿ (ಮೂಲ ನಿಗೂಢ) 54, ಪ್ರೀ ಸರ್ಜರಿ ಪರೀಕ್ಷೆಯಲ್ಲಿ ಐವರು, ಸೌದಿ ಅರೇಬಿಯ, ಮಸ್ಕತ್, ದುಬೈನಿಂದ ಬಂದ ಐವರು, ಮಹಾರಾಷ್ಟ್ರದಿಂದ ಇಬ್ಬರು, ಬೆಂಗಳೂರಿನಿಂದ ಬಂದ ಓರ್ವನಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರೆಲ್ಲರನ್ನೂ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸೋಂಕು ತಗುಲಿದವರಲ್ಲಿ ಮೂಲ ನಿಗೂಢವಾಗಿದ್ದವರ ಸಂಖ್ಯೆಯೇ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬುಧವಾರ ಒಂದೇ ದಿನ 54 ನಿಗೂಢ ಪ್ರಕರಣಗಳು ಕಂಡು ಬಂದಿವೆ. ಇದರಲ್ಲಿ ಎಲ್ಲವೂ ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್ ಪ್ರಕರಣಗಳಾಗಿವೆ.
ಸಮಾಧಾನಕರ ಬೆಳವಣಿಗೆಯಲ್ಲಿ ಬುಧವಾರ 12 ಮಂದಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ 695 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ. ಈಗ ಚಿಕಿತ್ಸೆಯಲ್ಲಿರುವ ಬಹುತೇಕ ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 31 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1421ಕ್ಕೆ ಏರಿಕೆಯಾಗಿದೆ.
Click this button or press Ctrl+G to toggle between Kannada and English