- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೋನ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ186 , ಉಡುಪಿ ಜಿಲ್ಲೆಯಲ್ಲಿ 90

corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮತ್ತೆ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಒಂದೇ ದಿನ ಬರೋಬ್ಬರಿ 186 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕೀತರ ಸಂಖ್ಯೆ 2034ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಪ್ರಕರಣಗಳು ಹೊರ ಜಿಲ್ಲೆಯವು.

ಸೋಂಕಿತರ ಸಂಪರ್ಕದಲ್ಲಿದ್ದ 37, ಐಎಲ್‌ಐ 64, ಎಸ್‌ಎಆರ್‌ಐ 17, ಕತರ್ ಮತ್ತು ದುಬೈನಿಂದ ಬಂದಿದ್ದ 10 ಮಂದಿ, 56 ಮಂದಿಗೆ ಸೋಂಕು ಯಾರಿಂದ ತಗುಲಿದೆ ಎನ್ನುವುದೇ ತಿಳಿದಿಲ್ಲ. ಇಬ್ಬರು ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದರು. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧೀಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಯಾವುದೇ ಸೋಂಕಿತರ ಸಂಪರ್ಕ ಇರದ 56 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನಲ್ಲಿ 32, ರ್ಯಾಂಡಮ್ ಸ್ಯಾಂಪಲ್‌ನಲ್ಲಿ 13, ಪ್ರೀ-ಸರ್ಜರಿ ಸ್ಯಾಂಪಲ್‌ನಲ್ಲಿ ಏಳು, ಪ್ರೀ-ಡೆಲಿವರಿ ಸ್ಯಾಂಪಲ್‌ನಲ್ಲಿ ನಾಲ್ಕು ಪ್ರಕರಣಗಳು ಕಂಡುಬಂದಿವೆ.

ದ.ಕ. ಜಿಲ್ಲೆಯಲ್ಲಿ ಕೊರೋನದಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೊರೋನ ಸೋಂಕಿಗೆ ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಸಾವಿಗೀಡಾದವರಲ್ಲಿ 33 ವರ್ಷ ವಯಸ್ಸಿನ ಯುವಕರೊಬ್ಬರೂ ಸೇರಿದ್ದಾರೆ. ಇವರು ಕೊರೋನ ಮಾತ್ರವಲ್ಲದೆ, ಇತರ ಕಾಯಿಲೆಯಿಂದಲೂ ಬಳಲುತ್ತಿದ್ದರು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿದ್ದ 67 ವರ್ಷದ ಮಹಿಳೆ ಹಾಗೂ 78 ವರ್ಷದ ವ್ಯಕ್ತಿ ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 90 ಜನರಿಗೆ ಪಾಸಿಟಿವ್‌ ಪ್ರಕರಣ ವರದಿಯಾಗಿದೆ. ಜೊತೆಗೆ ಶನಿವಾರ 573 ಜನರಿಗೆ ನೆಗೆಟಿವ್ ‌ವರದಿ ಬಂದಿದೆ.

ಶನಿವಾರ 573 ಜನರ ಮಾದರಿಗಳನ್ನು ಸಂಗ್ರಹಿಸಿದ್ದು 2030 ಜನರ ವರದಿಗಳು ಬರಬೇಕಾಗಿದೆ. ಸದ್ಯ 319 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 11 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 1,285 ಮಂದಿ ಮನೆಗಳಲ್ಲಿ ಮತ್ತು 137 ಜನರು ಆಸ್ಪತ್ರೆಗಳ ಐಸೊಲೇಶನ್‌ ವಾರ್ಡ್‌ಗಳಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ 1567 ಕೊರೊನಾ ಪ್ರಕರಣ ಪತ್ತೆಯಾಗಿದೆ.