ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆ

10:47 PM, Sunday, July 12th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

journalistಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಖಾಸಗಿ ಚಾನಲ್ಗಳ ಕ್ಯಾಮೆರಾಮೆನ್ಗಳಾಗಿರುವ ಇಬ್ಬರಿಗೆ ಮೊನ್ನೆ ತಲೆನೋವು ಜ್ವರದ ಲಕ್ಷಣ ಕಂಡು ಬಂದಿದ್ದು, ಈ ಹಿನ್ನೆಲೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಭಾನುವಾರ ವರದಿ ಬಂದಿದ್ದು, ಇವರಲ್ಲಿ ಸೋಂಕು ಇರುವುದು ದೃಢಗೊಂಡಿದೆ. ಇದೀಗ ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಆರೋಗ್ಯ ಪರಿಸ್ಥಿತಿಯೂ ಉತ್ತಮವಾಗಿದೆ.

ಪತ್ರಕರ್ತರು ಗುರುಪುರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ.

ಕೊರೊನಾ ಪ್ರಕರಣಗಳು ದ.ಕ.ಜಿಲ್ಲೆಯಲ್ಲಿ‌ ಕಾಣಿಸಿಕೊಳ್ಳುತ್ತಿದ್ದ ಸಂದರ್ಭ ಎಪ್ರಿಲ್ನಲ್ಲಿ‌ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಕೊರೊನಾ ತಪಾಸಣೆ ಮಾಡಲಾಗಿದ್ದು, ಯಾವುದೇ ಪತ್ರಕರ್ತರಲ್ಲಿಯೂ ಸೋಂಕು ಕಂಡು ಬಂದಿರಲಿಲ್ಲ.

ಆದರೆ ಇದೀಗ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಮೊದಲ ಬಾರಿಗೆ ಸೋಂಕು ದೃಢಗೊಂಡಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English