ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ 15 ಲಕ್ಷ ರೂ. ನಷ್ಟ

10:14 PM, Monday, July 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

fida Enterprisesಬಂಟ್ವಾಳ: ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಕಲ್ಲಡ್ಕದಲ್ಲಿನ ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಕಲ್ಲಡ್ಕ ದ ಪೀದಾ ಎಂಟರ್ ಪ್ರೈಸಸ್ ವಾಣಿಜ್ಯ ಸಂಕೀರ್ಣದಲ್ಲಿ ವಿದ್ಯುತ್ ಸಲಕರಣೆಗಳನ್ನು ದಾಸ್ತಾನು ಇಡಲಾಗಿದ್ದ ಕೊಠಡಿಗೆ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಎಲೆಕ್ಟ್ರಾನಿಕ್ ವಸ್ತುಗಳು ಸೋಂಪೂರ್ಣ ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು ಹೆಚ್ಚಿನ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಈ ಘಟನೆಯಿಂದ ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English