- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ 15 ಲಕ್ಷ ರೂ. ನಷ್ಟ

fida Enterprises [1]ಬಂಟ್ವಾಳ: ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಕಲ್ಲಡ್ಕದಲ್ಲಿನ ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಕಲ್ಲಡ್ಕ ದ ಪೀದಾ ಎಂಟರ್ ಪ್ರೈಸಸ್ ವಾಣಿಜ್ಯ ಸಂಕೀರ್ಣದಲ್ಲಿ ವಿದ್ಯುತ್ ಸಲಕರಣೆಗಳನ್ನು ದಾಸ್ತಾನು ಇಡಲಾಗಿದ್ದ ಕೊಠಡಿಗೆ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಎಲೆಕ್ಟ್ರಾನಿಕ್ ವಸ್ತುಗಳು ಸೋಂಪೂರ್ಣ ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು ಹೆಚ್ಚಿನ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಈ ಘಟನೆಯಿಂದ ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.