ವೆನ್ಲಾಕ್ ಆಸ್ಪತ್ರೆಯಲ್ಲಿ 37 ಐಸಿಯು ಕೊಠಡಿಗಳ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಹಣ : ಸಚಿವ ಬೈರತಿ

11:00 PM, Monday, July 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Bairati Basavaraj ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಯ ಕುರಿತು ಸಭೆ ನಡೆಸಿ ಉಳಿದ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಸೂಚನೆ ನೀಡಿದರು.

ನಗರದಾದ್ಯಂತ 60 ಸಾವಿರ ಎಲ್ಇಡಿ ಲೈಟ್ ಅಳವಡಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಅದಕ್ಕೆ ನಾನೇ ಬಂದು ಚಾಲನೆ ನೀಡಲಿದ್ದೇನೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ 37 ಐಸಿಯು ಕೊಠಡಿಗಳ ನಿರ್ಮಾಣಕ್ಕೆ ₹ 3.40 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಿಂದ ಹಣ ಒದಗಿಸಲಾಗುತ್ತದೆ ಎಂದರು.

ನಗರದ ಸರ್ಕ್ಯೂಟ್ ಹೌಸ್ನಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಮಂಗಳೂರು ನಗರದ ಅಭಿವೃದ್ಧಿಯ ಕುರಿತು ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ತುಂಬೆ ಡ್ಯಾಂಗೆ ತಡೆಗೋಡೆ ಹಾಗೂ ಚೆಕ್ ಡ್ಯಾಂ ನಿರ್ಮಾಣ ಮಾಡಬೇಕೆಂದು ಅಲ್ಲಿನ ಶಾಸಕರು, ಜನಪ್ರತಿನಿಧಿಗಳು ತಿಳಿಸಿದ್ದರು. ಅದಕ್ಕೆ ₹15 ಕೋಟಿ ವೆಚ್ಚ ತಗುಲಲಿದೆ. ಅದನ್ನು ಕೂಡ ಸ್ಮಾರ್ಟ್ ಸಿಟಿ ಮೂಲಕವೇ ನಿರ್ಮಾಣ ಮಾಡುವ ಯೋಜನೆ ಕೈಗೊಳ್ಳಲಾಗಿದೆ ಎಂದರು.

Bairati Basavaraj ಪಚ್ಚನಾಡಿ  ತ್ಯಾಜ್ಯ ಕುಸಿತದಿಂದ ಬಹಳಷ್ಟು ಜನರ ಆಸ್ತಿಪಾಸ್ತಿ ನಷ್ಟವಾಗಿತ್ತು. ಈಗಾಗಲೇ ₹1.91 ಕೋಟಿ ಪರಿಹಾರ ಈಗಾಗಲೇ ನೀಡಲಾಗಿದೆ. ನಾಲ್ಕು ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಬೇಕಿದೆ. ಸಭೆಯಲ್ಲಿ ನಿರ್ಣಯ ಕೈಗೊಂಡ ನಿಟ್ಟಿನಂತೆ ಅವರ ಹಾನಿಯಾಗಿರುವ ಆಸ್ತಿಗಳ ವಿವರಗಳನ್ನು ಪರಿಶೀಲನೆ ನಡೆಸಿ ವಾರದೊಳಗೆ ಅವರ ಖಾತೆಗೆ ಪರಿಹಾರದ ಮೊತ್ತ ಹಾಕುವಂತೆ ಸೂಚಿಸಿದ್ದೇನೆ ಎಂದರು.

ಮಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 17ಎಕರೆ, 13 ಎಕರೆ ಹಾಗೂ 46 ಎಕರೆ ಜಮೀನುಗಳನ್ನು ಆದಷ್ಟು ಶೀಘ್ರ ಸೈಟ್ಗಳನ್ನಾಗಿ ಪರಿವರ್ತಿಸಿ ಸಾರ್ವಜನಿಕರಿಗೆ ಒದಗಿಸಲು ತಿಳಿಸಿದ್ದೇನೆ. ಅದರಲ್ಲಿ ಪತ್ರಕರ್ತರಿಗೆ ನೀಡಲಾಗುವ ಬಡಾವಣೆಗೆ ಶೇ.5ರ ರಿಯಾಯಿತಿ ನೀಡಬೇಕೆಂದು ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮುಲ್ಕಿ ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್, ಉಪ ಮೇಯರ್ ವೇದವತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English