ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 62 ಮಂದಿ ಕೊರೊನಾ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ಸೋಂಕಿತರ ಸಂಖ್ಯೆ 2361ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 844 ಮಂದಿ ಸೋಂಕಿತರು ಗುಣಮುಖರಾದಂರಾಗಿ 1467 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿಯ ತನಕ 22589 ಮಂದಿಯ ವರದಿ ನೆಗೆಟಿವ್ ಆಗಿದೆ.
ಪ್ರಾಥಮಿಕ ಸಂಪರ್ಕದಿಂದ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 10 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಮರಳಿದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 38 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದಾಗಿ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
70 ವರ್ಷದ ವ್ಯಕ್ತಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 53 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು 60 ವರ್ಷದವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮತ್ತೊಬ್ಬ 70 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಪೈಕಿ 70 ವರ್ಷದ ವ್ಯಕ್ತಿಯೊಬ್ಬರು ಜುಲೈ 12ರಂದು ಮೃತಪಟ್ಟಿದ್ದರು. ಅವರಲ್ಲಿ ಇಂದು ಸೋಂಕು ಇರುವುದು ದೃಢಪಟ್ಟಿದೆ. ಇನ್ನು 70 ವದ ಮತ್ತೊಬ್ಬ ವ್ಯಕ್ತಿ ಜುಲೈ 11ರಂದು ಮೃತಪಟ್ಟಿದ್ದರು. ಅವರಲ್ಲಿ ಇಂದು ಸೋಂಕು ಪತ್ತೆಯಾಗಿದೆ.
ಸದ್ಯ ದ.ಕ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 53 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1661ಕ್ಕೆ ಏರಿಕೆಯಾಗಿದೆ. ಈ ನಡುವೆ ಇಂದು 260 ಮಂದಿಯ ವರದಿ ನೆಗೆಟಿವ್ ಅಗಿದೆ. ಈ ಬಗ್ಗೆ ಉಡುಪಿ ಜಿಲ್ಲಾಡಳಿತ ಅಧೀಕೃತ ಮಾಹಿತಿ ನೀಡಿದೆ.
Click this button or press Ctrl+G to toggle between Kannada and English