ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 91, ಉಡುಪಿ ಜಿಲ್ಲೆ 72

1:25 AM, Wednesday, July 15th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ.

ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ.

ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಮರಳಿದ ನಾಲ್ವರಲ್ಲಿಓರ್ವರಲ್ಲಿ ಸೋಂಕು ಪತ್ತೆಯಾಗಿದ್ದು, 35 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ 72 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English