ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ರಜನಿ ದುಗ್ಗಣ್ಣ ಆಯ್ಕೆ

7:54 PM, Wednesday, July 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

APMcಮಂಗಳೂರು : ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹಿರಿಯ ಸದಸ್ಯ ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ.

ಈ ಹಿಂದೆ ಕಾರ್ಕಳ ತಾಲೂಕು ಪಂಚಾಯತ್‌ ಸದಸ್ಯರಾಗಿ,ಮಂಡಲ ಪ್ರಧಾನರಾಗಿ, ಮೂಡಬಿದ್ರೆ ಪುರಸಭೆಯ ಸದಸ್ಯರಾಗಿ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ, ಕೆಎಸ್‌ಆರ್‌ಟಿಸಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಉಪಾಧ್ಯಕ್ಷರಾಗಿ ಮಾಜಿ ಮೇಯರ್‌ ರಜನಿ ದುಗ್ಗಣ್ಣ ಆಯ್ಕೆಯಾಗಿದ್ದು, ಅವರು  ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English