ಮಂಗಳೂರು :ಉಳ್ಳಾಲ ಪೋಲೀಸ್ ಠಾಣಾ ವ್ಯಾಪ್ತಿಯ, ತೊಕ್ಕೊಟ್ಟು ಜಂಕ್ಷನ್ ನಲ್ಲಿನ ಗುಜರಿ ಸಂಗ್ರಹಣ ದಾಸ್ತಾನಿಗೆ ನಿನ್ನೆ ಮಧ್ಯರಾತ್ರಿ 11.40ರ ಸುಮಾರಿಗೆ ಬೆಂಕಿ ತಗುಲಿದ ಪರಿಣಾಮ ಭಾರಿ ನಸ್ಟ ಸಂಭವಿಸಿದೆ. ಇದು ಮಹಮ್ಮದ್ ಆಶ್ರಫ್ ಎಂಬುವವರಿಗೆ ಸೇರಿದ್ದಾಗಿದ್ದು ಸುಮಾರು 5 ಲಕ್ಷದಸ್ಟು ನಸ್ಟ ಸಂಭವಿಸಿದೆ. ರಾತ್ರಿಯೇ ಎರಡು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯರು ಸಹಕರಿಸಿದರು.
ಈ ಪ್ರದೇಶದ ಅಕ್ಕಪಕ್ಕದಲ್ಲಿ ಮನೆ ಹಾಗೂ ವಾಣಿಜ್ಯ ಸಂಕೀರ್ಣಗಳಿದ್ದು ಅಗ್ನಿ ಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅವಘಡ ತಪ್ಪಿದೆ. ಪ್ರಕರಣವನ್ನು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
Click this button or press Ctrl+G to toggle between Kannada and English