ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಗೆ ಕೋವಿಡ್ ಸೋಂಕು ದೃಢ

10:32 PM, Friday, July 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

MithunRaiಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್-19 ಸೋಂಕು ತಾಗಿರುವುದು ದೃಢ ವಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜಿಲ್ಲೆಯ ಶಾಸಕರೊಬ್ಬರಿಗೆ, ಮಾಜಿ ಕೇಂದ್ರ ಸಚಿವರಿಗೂ ಕೋವಿಡ್ -19 ಸೋಂಕು ದೃಢವಾಗಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English