ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 311 ಮಂದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ.
1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 15 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 23168 ಮಂದಿಯ ವರದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ನೆಗೆಟಿವ್ ಬಂದಿದೆ.
ಶುಕ್ರವಾರದಂದು ಜಿಲ್ಲೆಯಲ್ಲಿ ಕೊರೊನಾ ಸೋಂಕೊನಿಂದಾಗಿ 8 ಮಂದಿ ಮೃತಪಟ್ಟಿ ದ್ದಾರೆ. ಮಂಗಳೂರಿನ 72 ವರ್ಷದ ಮಹಿಳೆ ಕೊರೊನಾದಿಂದಾಗಿ ಮೃತಪಟ್ಟಿದ್ದು, ಅವರು ಡಯಾಬಿಟೀಸ್ ಹಾಗೂ ಥೈರಾಯಿಡ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ 56 ವರ್ಷದ ವ್ಯಕ್ತಿಯಲ್ಲಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರು ಡಯಾಬಿಟೀಸ್ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮಂಗಳೂರಿನ 72 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರು ಡಯಾಬಿಟಿಸ್ ಸೇರಿದಂತೆ ಇತರ ಅನಾರೋಗ್ಯದಿಂದ ಬಳಲುತ್ತಿದ್ದರು. ಉತ್ತರ ಕನ್ನಡ ಮೂಲದ 70 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆಯ 69 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 84 ಜನರಲ್ಲಿ ಕೊರೊನಾ ಪಾಸಿಟಿವ್ ಆಗಿದೆ. ಜಿಲ್ಲೆಯಲ್ಲಿ ಒಟ್ಟು ದಾಖಲಾದ ಸೋಂಕು ಪ್ರಕರಣಗಳು 1979.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ ಎಂದು ವರದಿ ಬಂದಿದೆ,
Click this button or press Ctrl+G to toggle between Kannada and English