ಜು.31ರಂದು  ಕನ್ನಡ -ತಮಿಳು ದ್ವಿಭಾಷೆಯಲ್ಲಿ ವಿನೂತನ ಚಿತ್ರ `ಹವಾಲ’ ಒಟಿಟಿಯಲ್ಲಿ ಬಿಡುಗಡೆ

12:32 PM, Sunday, July 19th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

hawalaಮಂಗಳೂರು: ಕೊರೋನಾ ಲಾಕ್‌ಡೌನ್ ಸಿನಿಮಾ ರಂಗಕ್ಕೂ ಬಲವಾದ ಪೆಟ್ಟು ನೀಡಿದೆ. ಆದರೆ ಚಿತ್ರತಂಡದ ಹುಮ್ಮಸ್ಸು ಮಾತ್ರ ಕಡಿಮೆಯಾಗಿಲ್ಲ. ಚಿತ್ರ ಪ್ರೇಮಿಗಳಿಗಾಗಿ ವಿನೂತನವಾದ ಕಥಾ ಹಂದರ ಹೊಂದಿದ `ಹವಾಲ’ ಚಿತ್ರ ನಿರ್ಮಾಣಗೊಂಡಿದ್ದು, ಇದೇ ಜು.31 ರಂದು ವರ್ಲ್ಡ್ ಪ್ರೀಮಿಯರ್ (ಒಟಿಟಿ)ನಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರದ ನಿರ್ಮಾಣವನ್ನು ನಿರ್ಮಾಪಕ ಪುತ್ತೂರಿನ ಪ್ರವೀಣ್ ಶೆಟ್ಟಿ ಮಾಡಿದ್ದು, ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ. ಸೋಚ್ ಸಿನಿಮಾಸ್ ಇವರ ಸಹಯೋಗದೊಂದಿಗೆ ಚಿತ್ರದ ನಿರ್ಮಾಣವಾಗಿದ್ದು ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ.

ಆಪಲ್ಸ್ ಆಂಡ್ ಪಿಯರ್‍ಸ್ ಫಿಲ್ಮಿ ಮೈಸ್ಟಿಕ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಅಗ್ನಿಸಾಕ್ಷಿ ಖ್ಯಾತಿಯ ಅಮಿತ್ ರಾವ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಉದಯೋನ್ಮುಖ ಸಂಗೀತ ನಿರ್ದೇಶಕರಾದ ಕಿಶೋರ್ ಎಕ್ಸಾ ಎರಡು ಭಾಷೆಗಳಲ್ಲೂ ಸಾಹಿತ್ಯ ಬರೆದು ರಾಗ ಸಂಯೋಜಿಸಿದ್ದಾರೆ.

ಶ್ರೀನಿವಾಸ್ ಮತ್ತು ಅಮಿತ್ ರಾವ್ ನಾಯಕ ನಟರಾಗಿ ಹಾಗೂ ಕಮಲಿ ಧಾರಾವಾಹಿ ಖ್ಯಾತಿಯ ಅಮೂಲ್ಯ ಗೌಡ ಮತ್ತು ಕಿರುತೆರೆ ನಟಿ ಸಹನಾ ಪೂಜಾರಿ ನಾಯಕಿ ನಟಿಯರಾಗಿ ಅಭಿನಯಿಸಿದ್ದಾರೆ. ನಿರ್ದೇಶನ ವಿಭಾಗದಲ್ಲಿ ಚೆನ್ನೈ ಮೂಲದ ಎಸ್.ಪಿ. ಸೆಲ್ವಂ ಜೊತೆ ಸ್ಥಳೀಯರಾದ ರಾಜ್ ಕೃಷ್ಣ ಉಡುಪಿ ಸಹನಿರ್ದೇಶಕರಾಗಿ ಹಾಗೂ ಸಂತೋಷ್ ಕೊಲ್ಯ ಮತ್ತು ಹೆನ್ಲಿ ವಿಶಾಲ್ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮೊತ್ತಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ತುಳುನಾಡಿಗೆ ಸಂಬಂಧ ಪಟ್ಟ ದೃಶ್ಯಗಳನ್ನು ಸಂಯೋಜಿಸಿದ್ದು, ತುಳು ಭಾಷೆಯ ಸೊಗಡು ಮತ್ತು ಹುಲಿವೇಷ ವನ್ನೊಳಗೊಂಡ ದೃಶ್ಯವೊಂದು ಚಿತ್ರದ ಹೈಲೈಟ್ ಆಗಿದೆ. ಸಿನಿಮಾ ಪ್ರಿಯರು ಹವಾಲ ಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ಚಿತ್ರದ ಸಹ ನಿರ್ದೇಶಕ ಸಂತೋಷ್ ಕೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವು ಮಂದಿ ಕರಾವಳಿಗರು
ತಮಿಳು ಚಿತ್ರರಂಗದ ದಿಗ್ಗಜರಾದ ನೆಳಲ್ ಗಲ್ ರವಿ, ಮೀಸೆ ರಾಜೇಂದ್ರ, ರಂಜನ್ ಮತ್ತು ಸೂಪರ್ ಹಿಟ್ ತಮಿಳು ಸಿನಿಮಾ ‘ ಅಡಿತಡಿ ‘ ಯ ನಿರ್ದೇಶಕರಾದ ಶಿವಶಗುಲ್ ಕೂಡ ಬಹುಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದೇಯಿಬೈದೆತಿ ಚಲನಚಿತ್ರದ ನಿರ್ದೇಶಕರಾದ ಸೂರ್ಯೋದಯ ಪೆರಂಪಳ್ಳಿ ಭೂಗತ ಲೋಕದ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶ್ರೀನಾಥ್ ವಸಿಷ್ಠ, ಕಾಮಿಲ್ ಷೇಕ್ ಮುಂಬೈ, ಕರಾವಳಿಗರಾದ ಪ್ರವೀಣ್ ಶೆಟ್ಟಿ, ಸಂತೋಷ್ ಕೊಲ್ಯ, ಅರುಣ್ ಶೆಟ್ಟಿ ಜೆಪ್ಪು, ಕಿಶೋರ್ ಕುಂಪಲ ಪ್ರಧಾನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English