ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈಗ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್‌ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಆಸ್ಪತ್ರೆ, ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 104 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 1491ಕ್ಕೆ ಏರಿದೆ. 2,028 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ದ.ಕ. ಜಿಲ್ಲೆಯಲ್ಲಿ ರವಿವಾರ ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಇದರಲ್ಲಿ 12 ಮಂದಿ ಹೊರ ಜಿಲ್ಲೆಯವರು.
ರವಿವಾರ ಸಾವಿಗೀಡಾದವರಲ್ಲಿ ವೃದ್ಧೆ ಹಾಗೂ ಪುರುಷರಿದ್ದಾರೆ. ಮೃತರಲ್ಲಿ ಮಂಗಳೂರಿನ ನಿವಾಸಿ 77 ವರ್ಷದ ವೃದ್ಧೆಯು ಕ್ಯಾನ್ಸರ್, ಅಸ್ತಮಾ, ಸಂಧಿವಾತ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಮತ್ತೋರ್ವ ನಿವಾಸಿ 53 ವರ್ಷದ ಪುರುಷ ಅನಿಯಂತ್ರಿತ ಡಯಾಬಿಟಿಸ್ ಸೇರಿದಂತೆ ವಿವಿಧ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ರವಿವಾರ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2223ಕ್ಕೆ ಏರಿಕೆಯಾಗಿದೆ.
ಪ್ರಸ್ತುತ 584 ಸಕ್ರಿಯ ಪ್ರಕರಣಗಳಿವೆ, 349 ವರದಿಯು ನೆಗೆಟಿವ್ ಆಗಿದ್ದು, ಇನ್ನು ಕೂಡಾ 509 ಜನರ ಕೊರೊನಾ ಪರೀಕ್ಷಾ ವರದಿ ಬರಬೇಕಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
Click this button or press Ctrl+G to toggle between Kannada and English