ಹುಬ್ಬಳ್ಳಿ : ಕೊರೊನಾ ಮಹಾಮಾರಿ ತಡೆಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ. ನಗರದ ಯುವ ಹಾಗೂ ಉತ್ಸಾಹಿ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಿದೆ.
ಸೋಂಕು ತಡೆ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸಲಾಗುತ್ತಿದೆ. ಪಾಲಿಕೆಯ ಎಲ್ಲ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು, ಮಾಸ್ಕ್ ಧರಿಸದವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವುದು, ದುರ್ಬಲ ಆರೋಗ್ಯ ಹೊಂದಿದವರಿಗೆ ಇತರ ಚಿಕಿತ್ಸೆ, ಔಷಧಗಳ ಪೂರೈಕೆಗೆ ನೆರವಾಗುವುದು ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಯಂ ಸೇವಕರನ್ನು ಆಹ್ವಾನಿಸಿದೆ.ಉತ್ಸಾಹಿಗಳಿಗೆ ಸೂಕ್ತ ವೇದಿಕೆ ಒದಗಿಸಿದ ಪಾಲಿಕೆಪ್ರಸ್ತುತ ಹು-ಧಾ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಹಲವಾರು ಸಂಘ – ಸಂಸ್ಥೆಗಳಿಂದ ನಾಲ್ಕು ನೂರು ಜನರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ತಮ್ಮ ಹೆಸರನ್ನು ಪಾಲಿಕೆ ವೆಬ್ಸೈಟ್ನಲ್ಲಿ ನೋಂದಾಯಿಸಿದ್ದಾರೆ. ಎಲ್ಲ ವಾರ್ಡ್ಗಳಲ್ಲಿ ಸ್ವಯಂ ಸೇವಕರ ಅಗತ್ಯವಿದೆ.ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ನೀವೂ ಸಹ ಈ ಹೋರಾಟದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಲು ಬಯಸಿದ್ದರೆ, ಕೋವಿಡ್ -19 ಸವಾಲುಗಳನ್ನು ನಿವಾರಿಸಲು ಸಹಾಯ ಮಾಡಲು ನಿಮ್ಮ ಪರಿಣತಿ ಮತ್ತು ಸಂಪನ್ಮೂಲಗಳನ್ನು ಬಳಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಆಸಕ್ತರು ಸ್ವಯಂ ಸೇವಕರಾಗಲು ಈ ಕೆಳಗೆ ನೀಡಿರುವ ಲಿಂಕ್ ಬಳಸಿ, https://forms.gle/UYqVr2kawrgnd1Xh9 ನಲ್ಲಿ ಹೆಸರು, ವಿವರ ನೋಂದಾಯಿಸಿಕೊಳ್ಳಲು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.
ವರದಿ : ಶಂಭು
ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ.
Click this button or press Ctrl+G to toggle between Kannada and English