ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಜುಲೈ 21ರಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ.
ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.
ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 84 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 2405 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮಂಗಳವಾರದಂದು 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ 1752 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ
Click this button or press Ctrl+G to toggle between Kannada and English