ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಥಿಕ ಸಹಾಯ

11:34 AM, Wednesday, July 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

savitha samajaಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ್, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನಗರ ಅರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಅನ್‍ಲೈನ್‍ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 03-08-2020ರೊಳೆಗೆ ಸಲ್ಲಿಸುವುದು.

ಒಂದು ಬಾರಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

1. ಸ್ವಯಂ ಉದ್ಯೋಗ ಸಾಲ ಯೋಜನೆ: ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ. 50,000/- ಗಳ ವರೆಗೆ ನೆರವು. ಘಟಕ ವೆಚ್ಚ ರೂ. 50,000/-ಗಳಿಗೆ ಶೇಕಡ 30 ರಷ್ಟಯ ಗರಿಷ್ಠ ರೂ. 10,000/-ಗಳ ಸಹಾಯಧನ ಉಳಿಕೆ 70ರಷ್ಟು ರೂ. 40,000/-ಗಳನ್ನು ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಸಾಲ.

2. ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ : ಸವಿತಾ ಸಮಾಜಕ್ಕೆ ಸೇರಿದ ಜನರು ಸಾಂಪ್ರಾದಾಯಿಕ ವೃತ್ತಿದಾರರು ಅಥವಾ ಕುಲಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ ಆಧುನಿಕ ಉಪಕರಣಗಳನ್ನು ಖರೀದಿಸಲು ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು ವೃತ್ತಿ ಅನುಸಾರ ಗರಿಷ್ಠ ರೂ. 50,000/-ಗಳ ವರೆಗೆ ಆರ್ಥಿಕ ನೆರವು. ಘಟಕ ವೆಚ್ಚ ರೂ. 50,000/-ಗಳಿಗೆ ಶೇಕಡ 30 ರಷ್ಟು ಗರಿಷ್ಠ ರೂ. 10,000/-ಗಳ ಸಹಾಯಧನ ಉಳಿಕೆ ಶೇಕಡ 70ರಷ್ಟು ರೂ 40,000/-ಗಳನ್ನು ವಾರ್ಷಿಕ ಶೆಕಡ 2ರ ಬಡ್ಡಿದರದಲ್ಲಿ ಸಾಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಸವಿತಾ ಸಮಾಜಕ್ಕೆ ಸೇರಿದ ಫಲಾಪೇಕ್ಷಿಗಳು ಅರ್ಜಿಯನ್ನು ವೆಬ್‍ಸೈಟ್ www.dbcdc.karnataka.gov.in ನಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English