ಮಂಗಳೂರು : ಕೊರೊನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ಜನರನ್ನು ಆತಂಕಕ್ಕೀಡುಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಹೇಳಿದ್ದಾರೆ.
ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ.
ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ ನಡೆಸಿದ್ದು, ತುರ್ತು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದರು.
ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಅನುಮಾನಗಳಿದ್ದರೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದರೂ ಕಾಂಗ್ರೆಸ್ ನಾಯಕರು ಮತ್ತದೇ ಆರೋಪಗಳನ್ನು ಮಾಡಿದ್ದಾರೆ. ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹೇಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.
ಕೊರೋನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸು ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ಜನರನ್ನು ಆತಂಕಕ್ಕೀಡುಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ.
— Nalinkumar Kateel (@nalinkateel) July 23, 2020
ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಜಾಮೀನು ಪಡೆದು ಹೊರಗಿದ್ದಾರೆ. ಅವರೆಲ್ಲ ಜಾಮೀನು ಪಡೆಯುವ ಸ್ಥಿತಿ ಯಾಕೆ ಬಂತು ಎಂಬುದನ್ನೂ ಜನರಿಗೆ ಹೇಳಿ @siddaramaiah ಅವರೆ.
— Nalinkumar Kateel (@nalinkateel) July 23, 2020
ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಅನುಮಾನಗಳಿದ್ದರೆ ಬಗೆಹರಿಸುವುದಾಗಿ ಮುಖ್ಯಮಂತ್ರಿ @BSYBJP ಹೇಳಿದ್ದರೂ ಕಾಂಗ್ರೆಸ್ ನಾಯಕರು ಮತ್ತದೇ ಆರೋಪಗಳನ್ನು ಮಾಡಿದ್ದಾರೆ. ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
— Nalinkumar Kateel (@nalinkateel) July 23, 2020
ಜವಾಬ್ದಾರಿಯುತ ಸ್ಥಾನದಲ್ಲಿರುವ @siddaramaiah,ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ ನಡೆಸಿದ್ದು, ತುರ್ತು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
— Nalinkumar Kateel (@nalinkateel) July 23, 2020
Click this button or press Ctrl+G to toggle between Kannada and English