- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಬದಲು ಕಾಂಗ್ರೆಸ್ಸಿಗರು ಭಯ ಮೂಡಿಸುತ್ತಿದ್ದಾರೆ : ನಳಿನ್‌ ಕುಮಾರ್

nalinKumar [1]ಮಂಗಳೂರು :  ಕೊರೊನಾ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವನ್ನು ನಾವು ಜನಪ್ರತಿನಿಧಿಗಳು ಮಾಡಬೇಕಿದೆ. ಅದು ಬಿಟ್ಟು ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಹೊರಟಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ‌ ಜನರನ್ನು ಆತಂಕಕ್ಕೀಡುಮಾಡುವ ಕೆಲಸವನ್ನು ಮೊದಲು ನಿಲ್ಲಿಸಲಿ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧದ ಸಮರ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಲಿ ಎಂದು ನಳಿನ್‌ ಕುಮಾರ್‌ ಕಟೀಲ್  ಟ್ವೀಟ್‌ ಮೂಲಕ  ಹೇಳಿದ್ದಾರೆ.

ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ.

ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ ನಡೆಸಿದ್ದು, ತುರ್ತು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದರು.

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಅನುಮಾನಗಳಿದ್ದರೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಿಎಸ್‌‌ ಯಡಿಯೂರಪ್ಪ ಅವರು ಹೇಳಿದ್ದರೂ ಕಾಂಗ್ರೆಸ್ ನಾಯಕರು ಮತ್ತದೇ ಆರೋಪಗಳನ್ನು ಮಾಡಿದ್ದಾರೆ. ಕೊರೋನಾದಿಂದ ಹಾದಿಬೀದಿಯಲ್ಲಿ ಜನ ಸಾಯುತ್ತಿದ್ದಾರೆ ಎಂದು ಹಸಿ ಸುಳ್ಳು ಹೇಳಿ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.