ಹೆಂಡತಿ ಹಾಗೂ ಎರಡು ವರ್ಷದ ಮಗಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯೋಗಿ

11:19 PM, Saturday, July 25th, 2020
Share
1 Star2 Stars3 Stars4 Stars5 Stars
(No Ratings Yet)
Loading...

Mounesh Pattaraಧಾರವಾಡ: ಶನಿವಾರ ಬೆಳ್ಳಂಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೀಡಾದವರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ ( 36 ) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದವರು. ಟಾಟಾ ಮಾರ್ಕೋಪೋಲೋ ಕಂಪೆನಿಯ ಉದ್ಯೋಗಿಯಾಗಿದ್ದರಿಂದ ಧಾರವಾಡದಲ್ಲಿ ನೆಲೆಸಿದ್ದರು.

ಕಂಪನಿಯ 50ಕ್ಕೂ ಹೆಚ್ಚು ನೌಕರರಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆತಂಕಗೊಂಡಿದ್ದ ಈ ನೌಕರ, ಎಲ್ಲಿ ತಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿ ತನ್ನ ಹೆಂಡತಿ ಹಾಗೂ ಎರಡು ವರ್ಷದ ಮಗಳಿಗೆ ವಿಷ ನೀಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ : ಶಂಭು
ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English