- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು ಜುಲೈ 25 : ದಕ್ಷಿಣ ಕನ್ನಡ ಜಿಲ್ಲೆ 218, ಉಡುಪಿ ಜಿಲ್ಲೆ182, ಕಾಸರಗೋಡು ಜಿಲ್ಲೆ 105

Corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಕೊರೊನಾ ಸೋಂಕು  ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ.

46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಶನಿವಾರ  140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2127 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್‌ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 23 ರಂದು ಸಾವನ್ನಪ್ಪಿದ ಐವರ ಕೊರೊನಾ ವರದಿ ಇಂದು ಬಂದಿದ್ದು ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಹಾಗೆಯೇ ಜುಲೈ 24 ರಂದು ನಿಧನರಾದ ಕಾಸರಗೋಡು ಮಂಜೇಶ್ವರ ನಿವಾಸಿ ಸೇರಿದಂತೆ ಮೂವರಿಗೂ ಕೂಡಾ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದು ಈವರೆಗೆ 115 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಶನಿವಾರ ಮತ್ತೆ 182 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಶನಿವಾರ  ಒಟ್ಟು 493 ವರದಿಗಳು ನೆಗೆಟಿವ್‌ ಆಗಿದ್ದು 182 ವರದಿಗಳು ಪಾಸಿಟಿವ್‌ ಆಗಿದೆ ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3218 ಕ್ಕೆ ಏರಿಕೆಯಾಗಿದೆ. ಇನ್ನು ಕೂಡಾ 528 ವರದಿಗಳು ಬರಬೇಕಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 105 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಆ ಪೈಕಿ 88 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ವಿದೇಶದಿಂದ ಹಿಂದಿರುಗಿದ 10 ಜನರಲ್ಲಿ ಮತ್ತು ಇತರ ರಾಜ್ಯಗಳಿಂದ ಆಗಮಿಸಿದ ಏಳು ಜನರಲ್ಲಿ ಸೋಂಕು ದೃಢಪಟ್ಟಿದೆ.