ಲಾಲಾಜಿ ಅವರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನೇಮಕ ಹಿಂಪಡೆದ ಸರಕಾರ

10:41 PM, Monday, July 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

lalaji mendonಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರನ್ನು ನೇಮಕ ಮಾಡಿದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರಕಾರ ಆದೇಶವನ್ನು ಹಿಂಪಡೆದುಕೊಂಡಿದೆ.

ಮಧ್ಯಾಹ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರ ಅಧ್ಯಕ್ಷ ಸ್ಥಾನವನ್ನು ಸಂಜೆ ವಾಪಸ್ ಪಡೆಯಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.  ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಹೊರಡಿಸಿರುವ ಟಿಪ್ಪಣಿಯಲ್ಲಿದ್ದ ಮೂವರ ಹೆಸರುಗಳನ್ನು ಕೂಡಲೆ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಬೇಕಾದ ಶಾಸಕ ಲಾಲಾಜಿ ಮೆಂಡನ್, ಸಂಪರ್ಕಕ್ಕೆ ಸಿಗುತ್ತಿಲ್ಲ. ಕಾಪು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಲಾಲಾಜಿ ಮೆಂಡನ್ 2004, 2008, 2018ರಲ್ಲಿ ಮೂರು ಬಾರಿ ಶಾಸಕರಾಗಿ ಗೆಲುವು ಸಾಧಿಸಿ ದ್ದರು. 2013ರ ಚುನಾವಣೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English