ಕೊರೋನಾ ಸೋಂಕು ಜುಲೈ 27 : ದಕ್ಷಿಣ ಕನ್ನಡ 119, ಉಡುಪಿ ಜಿಲ್ಲೆ 225

12:56 AM, Tuesday, July 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

coronavirus ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು 119 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಸೋಂಕಿತರ ಸಂಖ್ಯೆ ಐದು ಸಾವಿರದ ಸನಿಹಕ್ಕೆ ತಲುಪಿದೆ. ಉಡುಪಿ ಜಿಲ್ಲೆಯಲ್ಲಿ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4930ಕ್ಕೆ ಏರಿಕೆಯಾಗಿದೆ. ಈ ಪೈಕಿ 2502 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರದಂದು 80 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ 2297 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಸೋಮವಾರ ಪತ್ತೆಯಾದ ಸೋಂಕಿತರ ಪೈಕಿ 46 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 34 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 33 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಈ ನಡುವೆ ಸೋಮವಾರದಂದು ಜಿಲ್ಲೆಯಲ್ಲಿ ಮತ್ತೆ 8 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಸೋಮವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ. ಈ ಪೈಕಿ 1415 ಮಂದಿ ಸದ್ಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2184 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English