ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ಯಾಕೆ ? ಯು.ಟಿ. ಖಾದರ್ ಪ್ರಶ್ನೆ

12:40 PM, Wednesday, July 29th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

UTKhader ಮಂಗಳೂರು : ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆ ಆಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಆರೋಪ ವೆತ್ತಿದ್ದಾರೆ.

ದನ  ಸಾಗಾಟಗಾರರ ಮೇಲೆ ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಖಾದರ್ ಹೇಳಿದ್ದಾರೆ.

ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿ ಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ನ್ಯಾಯ ಎಲ್ಲಿದೆ ಎಂದು ಯು.ಟಿ. ಖಾದರ್ ಟ್ವೀಟ್ ಮಾಡಿದ್ದಾರೆ.

ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದರ ಬೆನ್ನಲ್ಲೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English