- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

sindhubroopesh [1]ಮಂಗಳೂರು :  ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ  ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೋಮವಾರ ನೀಡಿದ್ದರು. ಈ ಹೇಳಿಕೆಯ ಸುದ್ದಿಯನ್ನು ಉಲ್ಲೇಖಿಸಿ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚರ್ಚೆ ನಡೆದಿದ್ದು, ಅದರಲ್ಲಿ ನೇರವಾಗಿ ಜಿಲ್ಲಾಧಿಕಾರಿಯ ಹತ್ಯೆಯ ಬೆದರಿಕೆಯೊಡ್ಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ನಡುವೆ ಸಿಂಧೂ ರೂಪೇಶ್ ಅವರನ್ನು ಮಂಗಳವಾರ ದಿಢೀರ್ ವರ್ಗಾವಣೆ ಗೊಂಡಿದ್ದಾರೆ.