- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು ಜುಲೈ 30 : ದಕ್ಷಿಣ ಕನ್ನಡ ಜಿಲ್ಲೆ 198, ಉಡುಪಿ ಜಿಲ್ಲೆ 248, ಕಾಸರಗೋಡು ಜಿಲ್ಲೆ 28

Corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಜುಲೈ 30 ರಂದು 198 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢ ಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5506ಕ್ಕೆ ಏರಿಕೆಯಾಗಿದೆ.

ಗುರುವಾರ ಪತ್ತೆಯಾದ ಸೋಂಕಿನ ಪ್ರಕರಣಗಳ ಪೈಕಿ 27 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 80 ಐಎಲ್ ಐ ಪ್ರಕರಣಗಳಾಗಿವೆ. 14 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದವರಲ್ಲಿ ಸೋಂಕು ಕಂಡುಬಂದಿದೆ.

ಗುರುವಾರದಂದು ಮತ್ತೆ 105 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 2561 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಸದ್ಯ 2800 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗುರುವಾರದಂದು 248 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4143ಕ್ಕೆ ಏರಿಕೆಯಾಗಿದೆ. ಈ ನಡುವೆ 2445 ಮಂದಿ ಇಲ್ಲಿಯ ತನಕ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 1669 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 28 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಬಂದಿದೆ. ಇಬ್ಬರು ವಿದೇಶ ಹಾಗೂ ಇಬ್ಬರು ಹೊರ ರಾಜ್ಯಗಳಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ.

ಚೆಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯಧಿಕ 12, ತ್ರಿಕ್ಕರಿಪುರ 6, ಕಾಞ0ಗಾಡ್4, ಕುಂಬ್ಡಾಜೆ 2, ಪುಲ್ಲೂರು ಪೆರಿಯ, ಮಂಜೇಶ್ವರ, ಅಜನೂರು, ಪಿಲಿಕ್ಕೋಡ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೆ ಜಿಲ್ಲೆಯಲ್ಲಿ 1,592 ಮಂದಿಗೆ ಸೋಂಕು ತಗಲಿದೆ. 705 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 3,638 ಮಂದಿ ನಿಗಾದಲ್ಲಿದ್ದು, 1009 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ