ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 204 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ.
ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 2929 ಮಂದಿ ಜಿಲ್ಲೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 75 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 63 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 14 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 52 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಮಂಗಳೂರು ನಿವಾಸಿ ಸುಮಾರು 47 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರಿನ 63 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆಯ 88 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ನಿವಾಸಿ 75 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರದಂದು 213 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4356ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 1805 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಜಿಲ್ಲೆಯಲ್ಲಿ ಒಟ್ಟು 2522 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈ ನಡುವೆ ಕೋವಿಡ್ ನಿಂದಾಗಿ ಉಡುಪಿಯಲ್ಲಿ ಈವರೆಗೆ 29 ಮೃತಪಟ್ಟಿದ್ದಾರೆ. 562 ಮಂದಿಯ ವರದಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರದಂದು 52 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 47 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಮೂವರು ಹೊರರಾಜ್ಯ ಹಾಗೂ ಇಬ್ಬರು ವಿದೇಶ ದಿಂದ ಬಂದವರಾಗಿದ್ದಾರೆ.
ಕುಂಬಳೆಯ 9 ಮಂದಿ, ಪುತ್ತಿಗೆಯ 6 ಮಂದಿ, ಮಂಗಲ್ಪಾಡಿಯ 8 ಮಂದಿ, ಕಾಸರಗೋಡಿನ 10 ಮಂದಿ, ಪುಲ್ಲೂರು ಪೆರಿಯ, ಪಳ್ಳಿಕೆರೆ ತಲಾ ಮೂವರು, ವರ್ಕಾಡಿ, ಕಳ್ಳಾರ್, ಚೆಂಗಳ, ಕುಂಬ್ಡಾಜೆಯ ತಲಾ ಇಬ್ಬರು, ಪೈವಳಿಕೆ ಕುತ್ತಿಕೋಲು, ಬೆಳ್ಳೂರು, ನೀಲೇಶ್ವರ, ಮಡಿಕೈನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಶುಕ್ರವಾರ 129 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ 615 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ 3521 ಮಂದಿ ನಿಗಾದಲ್ಲಿದ್ದು, ಈ ಪೈಕಿ 1028 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.
Click this button or press Ctrl+G to toggle between Kannada and English