ಕೊರೊನಾ ಮಹಾಮಾರಿಯನ್ನು ತೊಲಗಿಸಲು ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು : ಶ್ರೀ ಮೋಹನದಾಸ ಸ್ವಾಮೀಜಿ

4:06 PM, Saturday, August 1st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

MohanadasaSwamiji ಮಂಗಳೂರು : ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ದಲ್ಲಿ 48 ದಿನಗಳ ವರಮಹಾಲಕ್ಷ್ಮಿ ಪೂಜೆ ಜುಲೈ 31ರಂದು ಚಂಡಿಕಾ ಯಾಗದ ಪೂರ್ಣಾಹುತಿ ಯೊಂದಿಗೆ ಸಮಾಪನ ಗೊಂಡಿತು.

ಬೆಳಗ್ಗೆ ಗಣಪತಿ ಹೋಮ ನಾನಾ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಚಂಡಿಕಾ ಯಾಗ, ಕನಕಾಧಾರಾ ಯಾಗ ಪೂರ್ಣಹುತಿ ನಡೆಯಿತು. ಭಜನಾ ಸತ್ಸಂಗ ಕಾರ್ಯಕ್ರಮ ಪ್ರಸ್ತುತಗೊಂಡಿತು. ಸಂಜೆ ದುರ್ಗಾಪೂಜೆ, ಆಶ್ಲೇಷ ಬಲಿ ನಡೆದವು.

ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬದಲಾಗಬೇಕಾಗಿದೆ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗುವಂತಾಗಲು ಮಾನವೀಯ ಮೌಲ್ಯಗಳ ಅಗತ್ಯತೆಯಿದೆ. ಈ ಮಹಾಮಾರಿಯನ್ನು ತೊಲಗಿಸಲು ಸರಕಾರದ ನಿಯಮಗಳೊಂದಿಗೆ ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು ಎಂದು ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಶುಕ್ರವಾರ ಶ್ರೀ ಕ್ಷೇತ್ರದಲ್ಲಿ ಶ್ರೀವರಮಹಾಲಕ್ಷ್ಮೀ ವೃತಾಚರಣೆಯ ಸಮಾಪನ ದಲ್ಲಿ ಈ ಸಂದೇಶ ನೀಡಿದರು. ಕೊರೊನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ಅಧೀರರಾಗದೇ ಜೀವನ ನಡೆಸಲು ಭಗವಂತನ ಕೃಪೆ ಅವಶ್ಯವಾಗಿದೆ.  ಆರ್ಥಿಕವಾಗಿ, ವ್ಯಾವಹಾರಿಕವಾಗಿಯೂ ಕುಸಿತದ ಭೀತಿ ಎದುರಿಸುತ್ತಿರುವ ಸನ್ನಿವೇಶದಲ್ಲಿ ನಾವೆಲ್ಲರೂ ಆರೋಗ್ಯವಂತರಾಗಿ ಸಂಯಮ, ಆತ್ಮಸ್ಥೈರ್ಯದೊಂದಿಗೆ ಮುನ್ನಡೆಯಬೇಕಾಗಿದೆ. ಅನ್ಯೋನ್ಯತೆ, ಪರಸ್ಪರ ಸಹಕಾರ, ಮಾನವೀಯ ಮೌಲ್ಯದೊಂದಿಗೆ ಬಾಳಬೇಕಾಗಿದೆ ಎಂದು ನುಡಿದರು.

ಸಮಾಜದ ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟಕ್ಕೀಡಾಗಿ, ಎಲ್ಲೆಡೆ ನಿರುದ್ಯೋಗ ಸಮಸ್ಯೆ ಉದ್ಭವಿಸಿದ್ದು, ಆಡಳಿತ ಸರಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದರು. ವರಮಹಾಲಕ್ಷ್ಮಿನಮಗೆಲ್ಲರಿಗೂ ಆಂತರಿಕ ಸದೃಢತೆ ನೀಡಲಿ ಎಂದು ತಿಳಿಸಿದರು.

ಶ್ರೀ ಕ್ಷೇತ್ರದ ಟ್ರಸ್ಟಿ ತಾರಾನಾಥ ಕೊಟ್ಟಾರಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಅಶೋಕ್ ರೈ ಅರ್ಪಿಣಿಗುತ್ತು, ರಾಜೇಶ್ ಕುಮಾರ್ ಬಾಳೆಕಲ್ಲು, ಶ್ರೀಧರಪೂಜಾರಿ ಬಾಳೆಕಲ್ಲು ಇನ್ನಿತರರು ಇದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English