ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಮತ್ತೆ 163 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6015ಕ್ಕೆ ಏರಿಕೆಯಾಗಿದೆ.
ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿಯ ತನಕ 169 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2730 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ
ಇನ್ನು ಮಂಗಳೂರು ತಾಲೂಕಿನಲ್ಲಿ 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 13, ಬೆಳ್ತಂಗಡಿಯಲ್ಲಿ 19, ಪುತ್ತೂರು ಹನ್ನೊಂದು, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಹಾಗೂ ಹೊರ ರಾಜ್ಯದ ಮೂವರಲ್ಲಿ ರವಿವಾರದಂದು ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ರವಿವಾರ 182 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672ಕ್ಕೆ ಏರಿಕೆಯಾಗಿದೆ.
ರವಿವಾರ 182 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, 625 ವರದಿ ನೆಗೆಟಿವ್ ಆಗಿದೆ. ಇನ್ನು ಕೂಡಾ 616 ವರದಿಗಳು ಇನ್ನು ಲಭ್ಯವಾಗಬೇಕಿದೆ. ಜಿಲ್ಲೆಯಲ್ಲಿ ಇಂದು 50 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಂದು ಎಲ್ಲೂರಿನ 54 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
Click this button or press Ctrl+G to toggle between Kannada and English