ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

1:02 AM, Tuesday, August 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

hoisalaಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು ಮತ್ತು 2002, ಆಗಸ್ಟ್ 1 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

chennammaಈ ಬಗ್ಗೆ ಪೊಲೀಸ್ ಇಲಾಖೆಯ ಪ್ರಥಮ ವರ್ತಮಾನ ವರದಿ(ಈIಖ), ಭಾವಚಿತ್ರ, ಜನ್ಮ ದಿನಾಂಕ ದಾಖಲೆ (ತಾಲೂಕುಗಳಲ್ಲಿ ತಹಶೀಲ್ದಾರರು/ನಗರಗಳಲ್ಲಿ ಮಹಾನಗರಪಾಲಿಕೆಯಿಂದ ದೃಢೀಕರಿಸಿದ) ಹಾಗೂ ಶೌರ್ಯ ಪ್ರದರ್ಶಿಸಿದ ಬಗೆಗಿನ ಪತ್ರಿಕಾ ವರದಿ ಇನ್ನಿತರ ಪೂರಕ ದಾಖಲೆಗಳನ್ನು ಅರ್ಜಿ ಜೊತೆಗೆ ಲಗತ್ತಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು.

ಅರ್ಜಿಗಳನ್ನು ಆಗಸ್ಟ್ 30 ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ದೂರವಾಣಿ ಸಂಖ್ಯೆ: 0824-2451254 ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006 ದೂರವಾಣಿ ಸಂಖ್ಯೆ: 0824-2451254 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English