ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

1:10 PM, Tuesday, August 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

sukumar ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು.

ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರುಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರುದೂರು ನೀಡುವ ಕೆಲವು ಗಂಟೆಗಳ ಮೊದಲು ಸುಕುಮಾರ್ ಸನಿಲ್ ಅವರು ಕಾಂಗ್ರೆಸ್ ಮುಖಂಡರೊಬ್ಬರಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಣ ಮಾಡಿ ಉಡುಪಿಗೆ ತಂದು ಬಿಟ್ಟಿದ್ದಾರೆ ಎಂದು ತುಳುವಿನಲ್ಲಿ ಸಂಭಾಷಣೆ ಮಾಡಿರುವ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಅಪಹರಣದಿಂದಾಗಿ ಮೂಡಬಿದ್ರೆ ತಾಲೂಕು ಪಂಚಾಯತ್‌ನ ಮೊದಲ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯ ಕೊನೆ ಕ್ಷಣದಲ್ಲಿ ಕೈಕೊಟ್ಟ ಪರಿಣಾಮ ಎರಡೂ ಸ್ಥಾನ ಬಿಜೆಪಿ ಪಾಲಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English